ಪುತ್ತೂರು : ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ವಾರ್ಷಿಕ ಜಾತ್ರೆಯ ಅಂಗವಾಗಿ ಗುರುವಾರ ಬೆಳಗ್ಗೆ ಶ್ರೀ ದೇವರ ಬಲಿ ಉತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆಯಿತು. ರಾತ್ರಿ ಉತ್ಸವದ ಬಳಿಕ ಶ್ರೀ ದೇವರ ಪೇಟೆ ಸವಾರಿಯು ನೆಲ್ಲಿಕಟ್ಟೆ, ಸಾಲ್ಮರ, ಸೂತ್ರಬೆಟ್ಟುಗಳಲ್ಲಿ ನಡೆಯಿತು.
ಇಂದು ಜಾತ್ರೆಯ ಅಂಗವಾಗಿ ಎ. 12ರಂದು ಬೆಳಗ್ಗೆ ಬಲಿ ಉತ್ಸವ, ರಾತ್ರಿ ಉತ್ಸವದ ಬಳಿಕ ಶ್ರೀ ದೇವರ ಪೇಟೆ ಸವಾರಿಯು ಶಿವಪೇಟೆ, ತೆಂಕಿಲ, ಕೊಟ್ಟಿಬೆಟ್ಟು ಏಳ್ನಾಡುಗುತ್ತು, ಬೈಪಾಸ್ ಹೆದ್ದಾರಿ, ರಾಧಾಕೃಷ್ಣ ಮಂದಿರದ ಮೂಲಕ ಸಾಗಿ ದೇವಾಲಯಕ್ಕೆ ಮರಳಲಿದೆ.