ಪುತ್ತೂರು : ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ, ಪುತ್ತೂರು ಬೆಡಿ ಎ. 17 ರಂದು ರಾತ್ರಿ ನಡೆಯಲಿದೆ. ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮರಥ ವೆಂದರೆ ಅದು ನಡೆ ದೇಗುಲ. ಪತಾಕೆ, ಅಷ್ಟ ದಿಕ್ಪಾಲಕರು, ಶಿಖರ ಕಲಶ, ಶ್ವೇತ ಛತ್ರ ಮತ್ತು ಸತ್ತಿಗೆ ಅಳವಡಿಸಿದ 70 ಅಡಿ ಎತ್ತರದ ಬ್ರಹ್ಮರಥದಲ್ಲಿ ವರ್ಷದಲ್ಲಿ ಒಂದು ದಿನ ದೇವರು ವಿರಾಜಮಾನರಾಗುತ್ತಾರೆ.
ರಾತ್ರಿ 8ರ ಬಳಿಕ ಬ್ರಹ್ಮ ರಥೋತ್ಸವ ನಡೆಯುತ್ತದೆ. ಮುಂಭಾಗದ ರಥ ಬೀದಿಯಲ್ಲಿ 400 ಮೀ. ಉದ್ದಕ್ಕೆ ಬ್ರಹ್ಮರಥ ಸಂಚರಿಸಿ, ಸ್ವಸ್ಥಾನಕ್ಕೆ ಮರಳಿ ಬರುತ್ತದೆ.
ಜಾತ್ರೆಯಲ್ಲಿ ಇಂದು
ಬೆಳಗ್ಗೆ ಉತ್ಸವ, ವಸಂತಕಟ್ಟೆ ಪೂಜೆ, ದರ್ಶನ ಬಲಿ, ರಾತ್ರಿ ಉತ್ಸವ, ಸಿಡಿಮದ್ದು ಪ್ರದರ್ಶನ, ಬ್ರಹ್ಮರಥೋತ್ಸವ, ಬಂಗಾರ್ ಕಾಯರ್ಕಟ್ಟೆ ಸವಾರಿ, ಶ್ರೀ ದಂಡನಾಯಕ ಉಳ್ಳಾಳ್ತಿ ದೈವಗಳ ಬೀಳ್ಕೊಡುಗೆ, ಶ್ರೀಭೂತಬಲಿ, ಶಯನ ನಡೆಯಲಿದೆ.