Home ಧಾರ್ಮಿಕ ಸುದ್ದಿ ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಿಜೃಂಭಣೆಯ ಷಷ್ಠಿ ಮಹೋತ್ಸವ

ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಿಜೃಂಭಣೆಯ ಷಷ್ಠಿ ಮಹೋತ್ಸವ

377
0
SHARE

ಪುಂಜಾಲಕಟ್ಟೆ : ಬಂಟ್ವಾಳ ತಾಲೂಕು ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಷಷ್ಠಿ ಮಹೋತ್ಸವ ಕಾರ್ಯಕ್ರಮ ಗುರುವಾರ ವಿಜೃಂಭಣೆಯಿಂದ ಜರಗಿತು.

ಕ್ಷೇತ್ರದ ತಂತ್ರಿ ವೇ|ಮೂ| ಬಾಲಕೃಷ್ಣ ಪಾಂಗಣ್ಣಾಯ ಅವರ ನೇತೃತ್ವದಲ್ಲಿ, ಪ್ರ. ಅರ್ಚಕ ಡಿ. ರಾಮಚಂದ್ರ ಭಟ್‌ ಮತ್ತು ಅರ್ಚಕ ಹರೀಶ್‌ ಭಟ್‌ ಸಹಕಾರದಲ್ಲಿ ಬೆಳಗ್ಗೆ ಪಂಚಾಮೃತ ಮತ್ತು ಪವಮಾನ ಅಭಿಷೇಕ, ತುಲಾಭಾರ ಸೇವೆ, ಮಹಾಪೂಜೆ, ಷಷ್ಠಿ ಮಹೋತ್ಸವ, ದೇವರ ಬಲಿ ಉತ್ಸವ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುಧೀರ್‌ ಕುಮಾರ್‌ ಶೆಟ್ಟಿ,ಉತ್ಸವ ಸಮಿತಿ ಅಧ್ಯಕ್ಷ ಸದಾನಂದ ಶೆಟ್ಟಿ ದರ್ಬೆ, ಲಲಿತಾ ವಸಂತ ಕುಮಾರ್‌ ಪಡ್ರಾಯಿಗುತ್ತು, ಭಜನ ಮಂಡಳಿ ಅಧ್ಯಕ್ಷ ದಿನೇಶ್‌ ಭಟ್‌ ದೈಲಾ, ತಾಲೂಕು ಪಂಚಾಯತ್‌ ಸದಸ್ಯೆ ಮಂಜುಳಾ ಸದಾನಂದ, ಗ್ರಾ.ಪಂ. ಸದಸ್ಯರು, ವ್ಯವಸ್ಥಾಪನ ಸಮಿತಿ, ಉತ್ಸವ ಸಮಿತಿ, ಭಜನ ಮಂಡಳಿ ಸದಸ್ಯರು, ಗ್ರಾಮಸ್ಥರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here