ಸವಣೂರು : ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಫೆ. 2ರಿಂದ 7ರ ತನಕ ನವೀಕರಣ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ, ಜಾತ್ರೆ ನಡೆಯಲಿದ್ದು, ದೇವಸ್ಥಾನದ ಪ್ರಧಾನ ಅರ್ಚಕ ಗೋಪಾಲಕೃಷ್ಣ ಬಡೆಕ್ಕಿಲಾಯ ಹಾಗೂ ಮನೆಯವರು ಫೆ. 1ರಂದು ಜನರೇಟರ್ ಕೊಡುಗೆ ನೀಡಿದರು.
ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸವಣೂರು ಕೆ. ಸೀತಾರಾಮ ರೈ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವೆಂಕಪ್ಪ ಶೆಟ್ಟಿ ಸವಣೂರುಗುತ್ತು, ಪ್ರಧಾನ ಕಾರ್ಯದರ್ಶಿ ನೆಲ್ತಿಲ ರವೀಂದ್ರನಾಥ ರೈ ನೋಲ್ಮೆ, ಬ್ರಹ್ಮಕಲಶೋತ್ಸವ ಸಮಿತಿ ಕೋಶಾಧಿಕಾರಿ ಬೆಳಿಯಪ್ಪ ಗೌಡ ಚೌಕಿಮಠ, ಅರ್ಚಕ ನಾರಾಯಣ ಬಡೆಕಿಲ್ಲಾಯ, ಮಮತಾ ಜಿ. ಬಡೆಕ್ಕಿಲಾಯ ಹಾಗೂ ಮನೆಯವರು ಉಪಸ್ಥಿತರಿದ್ದರು.