ಸವಣೂರು : ಸವಣೂರು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ನವೀಕರಣ ಪುನಃ ಪ್ರತಿಷ್ಠ ಅಷ್ಟಬಂಧ ಬ್ರಹ್ಮಕಲಶೊತ್ಸವ ಹಾಗೂ ವರ್ಷಾವಧಿ ಜಾತ್ರೆ ಫೆ. 2ರಿಂದ ಫೆ. 7ರ ವರೆಗೆ ನಡೆಯಲಿದೆ.
ಫೆ. 2ರಂದು ಸಂಜೆ ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ಅಗಮನದೊಂದಿಗೆ ವೈದಿಕ ಕಾರ್ಯಕ್ರಮ ಆರಂಭವಾಗಲಿದೆ, ಫೆ. 3ರಂದು ಬೆಳಗ್ಗೆ ವೈದಿಕ ಕಾರ್ಯಕ್ರಮ, ಮಧ್ಯಾಹ್ನ ಅನ್ನಸಂತರ್ಪಣೆ, ಮಧ್ಯಾಹ್ನ ಭಜನ ಕಾರ್ಯಕ್ರಮ, ರಾತ್ರಿ ಶ್ರೀ ದುರ್ಗಾ ನಮಸ್ಕಾರ ಪೂಜೆ ನೆರವೆರಲಿದೆ.
ಸಭಾ ಕಾರ್ಯಕ್ರಮ
ಸಂಜೆ ನಡೆಯುವ ಧಾರ್ಮಿಕ ಸಭೆಯಲ್ಲಿ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ. ಶಿಲ್ಪ ಶಾಸ್ತ್ರಜ್ಞ ಎಸ್.ಎಂ. ಪ್ರಸಾದ್ ಮುನಿಯಂಗಳ ಅವರು ಧಾರ್ಮಿಕ ಉಪನ್ಯಾಸ ನೀಡಲಿದ್ದು, ಸಂಸದ ನಳಿನ್ ಕುಮಾರ್ ಕಟೀಲು ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿ.ಪಂ., ಸದಸ್ಯೆ ಪ್ರಮೀಳಾ ಜನಾರ್ದನ್, . ಸವಣೂರು ಗ್ರಾ.ಪಂ., ಅಧ್ಯಕ್ಷೆ ಇಂದಿರಾ ಬಿ.ಕೆ., ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ . ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುಧಾಕರ್ ಶೆಟ್ಟಿ, ಜಾಕೆ ಮಾಧವ ಗೌಡ, ಅರಣ್ಯಾಕಾರಿ ಪ್ರವೀಣ್ ಶೆಟ್ಟಿ, ನ್ಯಾಯವಾದಿ ಮೋಹನ್ ಗೌಡ ಇಡ್ಯಡ್ಕರವರು ಭಾಗವಹಿಸಲಿದ್ದಾರೆ.
ಫೆ. 4ರಂದು ಬೆಳಗ್ಗೆ ಮತ್ತು ರಾತ್ರಿ ವೈದಿಕ ಕಾರ್ಯಕ್ರಮ ಮಧ್ಯಾಹ್ನ ಅನ್ನಸಂತರ್ಪಣೆ, ಅಪರಾಹ್ನ ಭಜನೆ ಜರಗಲಿದೆ. ಫೆ. 5ರಂದು ಬೆಳಗ್ಗೆ ಮತ್ತು ರಾತ್ರಿ ವೈದಿಕ ಕಾರ್ಯಕ್ರಮ, ಮಧ್ಯಾಹ್ನ ಅನ್ನಸಂತರ್ಪಣೆ, ಭಜನ ಕಾರ್ಯಕ್ರಮ ನಡೆಯಲಿದೆ.
ಧಾರ್ಮಿಕ ಸಭೆ
ಸಂಜೆ ನಡೆಯಲಿರುವ ಧಾರ್ಮಿಕ ಸಭೆಯಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಆಶೀರ್ವಚನ ನೀಡಲಿದ್ದಾರೆ. ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿರವರು ಧಾರ್ಮಿಕ ಉಪನ್ಯಾಸ ನೀಡಲಿದ್ದು, ಶಾಸಕ ಎಸ್. ಅಂಗಾರ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿ.ಪಂ., ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮಾಜಿ ಸಚಿವ ಬಿ. ರಮಾನಾಥ ರೈ, ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ತಾ.ಪಂ., ಉಪಾಧ್ಯಕ್ಷೆ ರಾಜೇಶ್ವರಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪುತ್ತೂರು ತಾ| ಯೋಜನಾಧಿಕಾರಿ ಜನಾರ್ದನ್ ಅವರು ಭಾಗವಹಿಸಲಿದ್ದಾರೆ. ಫೆ. 6ರಂದು ಬೆಳಗ್ಗೆ ಮತ್ತು ರಾತ್ರಿ ವೈದಿಕ ಕಾರ್ಯಕ್ರಮ, ಅಪರಾಹ್ನ ಭಜನೆ ಕಾರ್ಯಕ್ರಮ ನಡೆಯಲಿದೆ. ಪ್ರತಿದಿನ ಭಜನೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಫೆ. 7: ಬ್ರಹ್ಮಕಲಶೋತ್ಸವ
ಫೆ. 7ರಂದು ಬೆಳಗ್ಗೆ 8.1ರಿಂದ ಶ್ರೀ ವಿಷ್ಣುಮೂರ್ತಿ ದೇವರ ಮತ್ತು ಪರಿವಾರ ದೇವರುಗಳ ಪುನಃ ಪ್ರತಿಷ್ಠೆ, ಜೀವ ಕಶಾಭಿಷೇಕ, ಅಷ್ಟಬಂಧ ಲೇಪನ, ಪ್ರತಿಷ್ಠಾ ಪೂಜೆ, ಪರಿಕಲಾಭಿಷೇಕ ನಡೆದು ಪೂರ್ವಾಹ್ನ 11.30ಕ್ಕೆ ಬ್ರಹ್ಮಕಲಶಾಭಿಷೇಕ ನಡೆಯಲಿದೆ. ಮಧ್ಯಾಹ್ನ ಅನ್ನಸಂತರ್ಪಣೆ, ರಾತ್ರಿ ರಂಗಪೂಜೆ, ದರ್ಶನ ಬಲಿ, ಮಧ್ಯಾಹ್ನ ಭಜನೆ ನಡೆಯಲಿದೆ.