ಮಹಾನಗರ : ಜಪ್ಪಿನಮೊಗರು ತಂದೊಳಿಗೆ ಶ್ರೀ ಆದಿಮಾಯೆ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಕಂಕನಾಡಿ ಗರೋಡಿ ಕ್ಷೇತ್ರದ ಅಧ್ಯಕ್ಷ ಕೆ. ಚಿತ್ತರಂಜನ್ ವಹಿಸಿದ್ದರು. ಕಾರ್ಯಕ್ರಮವನ್ನು ಕಟೀಲು ಕ್ಷೇತ್ರದ ಅನಂತ ಪದ್ಮನಾಭ ಆಸ್ರಣ್ಣ ಅವರು ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ನಟಿ ತಾರಾ, ರೆಡ್ಕ್ರಾಸ್ ಚೇರ್ಮನ್ ಶಾಂತಾರಾಮ ಶೆಟ್ಟಿ, ಕಂರ್ಬಿಸ್ಥಾನ ಶ್ರೀ ವೈದ್ಯನಾಥ ದೈವಸ್ಥಾನದ ಆಡಳಿತ ಮೊಕ್ತೇಸರ ಜೆ. ಅನಿಲ್ ಶೆಟ್ಟಿ ಮನ್ನುತೋಟಗುತ್ತು, ವಾಸ್ತು ಶಿಲ್ಪಿ ತಜ್ಞ ಎಸ್. ಆನಂದ್, ಬಿಜೆಪಿ ವಕ್ತಾರ ಜಿತೇಂದ್ರ ಕೊಟ್ಟಾರಿ, ಶ್ರೀ ಆದಿಮಾಯೇ ದೇವಸ್ಥಾನದ ಧರ್ಮದರ್ಶಿ ದಯಾನಂದ, ಆಡಳಿತ ಮೊಕ್ತೇಸರ ಕೆ. ದೇವದಾಸ ಶೆಟ್ಟಿ, ಆದಿಮಾಯೆ ಸೇವಾ ಸಂಘದ ಅಧ್ಯಕ್ಷ ಹರೀಶ್ ತಂದೊಳಿಗೆ, ಮಹಿಳಾ ಸಮಿತಿ ಅಧ್ಯಕ್ಷೆ ಸುನೀತಾ ಡಿ. ಶೆಟ್ಟಿ ಉಪಸ್ಥಿತರಿದ್ದರು.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಆದಿಮಾಯೆ ಸೇವಾ ಸಮಿತಿ ಜಪ್ಪಿನಮೊಗರು ಆಶ್ರಯದಲ್ಲಿ ಸನಾತನ ನಾಟ್ಯಾಲಯದ ವತಿಯಿಂದ ಪುಣ್ಯಭೂಮಿ ಭಾರತ ಎಂಬ ಕಥಾನಕವನ್ನು ನಡೆಸಲಾಯಿತು.
ಪ್ರಧಾನ ಕಾರ್ಯದರ್ಶಿ ಜೆ. ನಾಗೇಂದ್ರ ಕುಮಾರ್ ಸ್ವಾಗತಿಸಿದರು. ಸಮಿತಿಯ ಅಧ್ಯಕ್ಷ ಹರೀಶ್ ಶೆಟ್ಟಿ ತಾರ್ದೊಲ್ಯ ವಂದಿಸಿದರು. ಅಭಿಷೇಕ್ ಶೆಟ್ಟಿ ಪಡೀಲ್, ಗುರುರಾಜ್ ಶೆಟ್ಟಿ ಅಡ್ಯಾರ್ ಕಾರ್ಯಕ್ರಮ ನಿರೂಪಿಸಿದರು.
ಬೆಳಗ್ಗೆ 10.40ಕ್ಕೆ ವೇ| ಮೂ| ವಿಟ್ಟಲ್ದಾಸ್ ತಂತ್ರಿ ಅವರ ಪೌರೋಹಿತ್ಯದಲ್ಲಿ ಶ್ರೀ ಗಣಪತಿ, ಶ್ರೀ ಕೃಷ್ಣ ಹಾಗೂ ಶ್ರೀ ಆದಿಮಾಯೆ ದೇವರಿಗೆ ಬ್ರಹ್ಮಕಲಶೋತ್ಸವ ನಡೆಯಿತು. ಮಧ್ಯಾಹ್ನ 12.30ಕ್ಕೆ ಮಹಾಪೂಜೆಯೊಂದಿಗೆ ಬಲಿ ಪೂಜೆ ನಡೆದು, ಸುಮಾರು 5,000 ಮಂದಿ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು.