ಉಡುಪಿ,: ದೊಡ್ಡಣಗುಡ್ಡೆಯ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಆ. 24ರ ಸಂಜೆ 5ರಿಂದ ಸಾಮೂಹಿಕ ವರಮಹಾಲಕ್ಷ್ಮೀ ವ್ರತ ಪೂಜಾ ಮಹೋತ್ಸವವು ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಉಪಸ್ಥಿತಿಯಲ್ಲಿ, ವೇ|ಮೂ| ಕೃಷ್ಣಮೂರ್ತಿ ತಂತ್ರಿ ನೇತೃತ್ವದಲ್ಲಿ ನಡೆಯಲಿದೆ.
ರಾತ್ರಿಯ ಕಲ್ಪೋಕ್ತ ಪೂಜೆಯು ಸಂಜೆ 7.30ಕ್ಕೆ ಆರಂಭಗೊಳ್ಳಲಿದ್ದು, ವಿಶೇಷವಾಗಿ ಸೋಣ ತಿಂಗಳ ಸೋಣ ಆರತಿ ಸೇವೆ ನೆರವೇರಲಿದೆ ಎಂದು ಕ್ಷೇತ್ರದ ಉಸ್ತುವಾರಿ ಕುಸುಮಾ ನಾಗರಾಜ್ ತಿಳಿಸಿದ್ದಾರೆ.