Home ಧಾರ್ಮಿಕ ಸುದ್ದಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರತಿಷ್ಠಾ ವರ್ಧಂತ್ಯುತ್ಸವ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರತಿಷ್ಠಾ ವರ್ಧಂತ್ಯುತ್ಸವ

1622
0
SHARE

ಪುತ್ತೂರು : ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಮೇ 14ರಂದು ಸೋಮವಾರ ಪ್ರತಿಷ್ಠಾ ವರ್ಧಂತ್ಯುತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ದೇವಾಲಯದಲ್ಲಿ ಬೆಳಗ್ಗೆ 108 ಕಾಯಿ ಗಣಪತಿ ಹೋಮ, ಶತರುದ್ರಾಭಿಷೇಕ, ಚಂಡಿಕಾ ಹೋಮ, ಸುಬ್ರಹ್ಮಣ್ಯ ಹೋಮ, ನಾಗಸನ್ನಿಧಿಯಲ್ಲಿ ವಿಶೇಷ ಪೂಜೆ ಸೇವಾಧಿಗಳು ನಡೆದವು. ಮಧ್ಯಾಹ್ನ ಪೂರ್ಣಾಹುತಿಯ ಬಳಿಕ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ರಾತ್ರಿ ಪೂಜೆಯ ಬಳಿಕ ಶ್ರೀ ದೇವರ ಬಲಿ ಉತ್ಸವ ನಡೆಯಿತು.

ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎನ್‌. ಸುಧಾಕರ ಶೆಟ್ಟಿ, ಸದಸ್ಯರು, ನೂರಾರು ಸಂಖ್ಯೆಯ ಭಕ್ತರು ಪಾಲ್ಗೊಂಡರು.

LEAVE A REPLY

Please enter your comment!
Please enter your name here