ಉಡುಪಿ: ಉಡುಪಿ ಶ್ರೀಕೃಷ್ಣ ಮಠ ಪರ್ಯಾಯ ಶ್ರೀ ಪಲಿಮಾರು ಮಠ ಮತ್ತು ಸೋದೆ ಶ್ರೀ ವಾದಿರಾಜ ಮಠದ ಅಶ್ರಯದಲ್ಲಿ ಭಾವೀ ಸಮೀರ ಶ್ರೀ ವಾದಿರಾಜ ಗುರುಸಾರ್ವಭೌಮರ ಆಶ್ರಮ ಗುರುಗಳಾದ ಶ್ರೀ ವಾಗೀಶ ತೀರ್ಥರ ಆರಾಧನಾ ಪಂಚ ಶತಮಾನೋತ್ಸವದ ಪ್ರಯುಕ್ತ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಜ್ಞಾನಯಜ್ಞವನ್ನು ರವಿವಾರದಂದು ಪರ್ಯಾಯ ಶ್ರೀ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಉದ್ಘಾಟಿಸಿದರು.
ಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು, ಪೇಜಾವರ ಕಿರಿಯ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು, ಸೋದೆ ಮಠಾಧೀಶ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಉಪಸ್ಥಿತರಿದ್ದರು.