Home ಧಾರ್ಮಿಕ ಸುದ್ದಿ ಕುಕ್ಕೆ: ಸಂಭ್ರಮದ ಕಿರುಷಷ್ಠಿ ರಥೋತ್ಸವ

ಕುಕ್ಕೆ: ಸಂಭ್ರಮದ ಕಿರುಷಷ್ಠಿ ರಥೋತ್ಸವ

1113
0
SHARE

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬುಧವಾರ ಶ್ರೀ ಸುಬ್ರಹ್ಮಣ್ಯ ದೇವರ ಕಿರುಷಷ್ಠಿ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮ ಸಡಗರದಿಂದ ನೆರವೇರಿತು.

ರಥಾರೋಹಣದ ಬಳಿಕ ದೇವಾಲಯದ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯ ಅವರು ದೇವರಿಗೆ ಪೂಜೆ ನೆರವೇರಿಸಿದರು.

ರಥೋತ್ಸವದ ಬಳಿಕ ಸವಾರಿ ಮಂಟಪ ಬಳಿಯ ಕಟ್ಟೆಯಲ್ಲಿ ಪೂಜೆ ನೆರವೇರಿತು.

ಆಡಳಿತಾಧಿಕಾರಿ ಎಂ.ಜೆ. ರೂಪಾ, ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್‌., ಸಹಾಯಕ ಕಾರ್ಯ ನಿರ್ವಹಣಾಧಿಕಾರಿ ಚಂದ್ರಶೇಖರ ಪೆರಾಲ್‌ ಪಾಲ್ಗೊಂಡರು.

LEAVE A REPLY

Please enter your comment!
Please enter your name here