Home ಧಾರ್ಮಿಕ ಸುದ್ದಿ ಮಂತ್ರಾಲಯದಲ್ಲಿ ರಾಯರವೈಭವದ ಪೂರ್ವಾರಾಧನೆ

ಮಂತ್ರಾಲಯದಲ್ಲಿ ರಾಯರವೈಭವದ ಪೂರ್ವಾರಾಧನೆ

1274
0
SHARE

ರಾಯಚೂರು: ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 347ನೇ ಆರಾಧನಾ ಮಹೋತ್ಸವ ನಿಮಿತ್ತ ಸೋಮವಾರ ಪೂರ್ವಾರಾಧನೆ ವಿಜೃಂಭಣೆಯಿಂದ ನೆರವೇರಿತು. ಆರಾಧನೆ ನಿಮಿತ್ತ ರಾಘವೇಂದ್ರ ಸ್ವಾಮಿಗಳ ಮೂಲ ವೃಂದಾವನಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು. ಬೆಳಗಿನ ಜಾವ ನಿರ್ಮಾಲ್ಯ ವಿಸರ್ಜನೆ, ಗ್ರಂಥ ಪಾರಾಯಣ ಕಾರ್ಯಕ್ರಮ ನೆರವೇರಿಸಲಾಯಿತು. ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಪ್ರಹ್ಲಾದರಾಜರ ಪಾದುಕೆ ಪೂಜೆ ನೆರವೇರಿಸಿದರು. ನಂತರ ಪೂಜಾ ಮಂದಿರದಲ್ಲಿ ಚಿನ್ನದ ಮಂಟಪದಲ್ಲಿ ಶ್ರೀ ಮೂಲ ರಾಘುಪತಿ ವೇದವಾಸ್ಯರ ಪೂಜೆ, ಅಲಂಕಾರ ಸಂತರ್ಪಣೆ, ಹಸ್ತೋದಕ, ಮಹಾಮಂಗಳಾರತಿ ಸೇವೆ ನೆರವೇರಿಸಿದರು. ಶ್ರೀಮಠದ ಪ್ರವಚನ ಮಂದಿರದಲ್ಲಿ ಪೂರ್ವಾರಾಧನೆ ನಿಮಿತ್ತ ವಿವಿಧ ಪಂಡಿತರಿಂದ ಪ್ರವಚನ ನಡೆಯಿತು.

ಆರಾಧನೆಗೆ ದೇಶ ವಿದೇಶಗಳಿಂದ ಭಕ್ತರು ಆಗಮಿಸಿದ್ದು, ರಾಯರ ದರ್ಶನಾಶೀರ್ವಾದ ಪಡೆದು ಪುನೀತರಾದರು. ಈ ಬಾರಿ ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಚನ್ನಾಗಿರುವ ಕಾರಣ ಭಕ್ತರ ಪುಣ್ಯಸ್ನಾನಕ್ಕೆ ಅನುಕೂಲವಾಗಿದೆ. ಸ್ನಾನಘಟ್ಟದಲ್ಲಿ ಮಠದಿಂದ ಪುಣ್ಯಸ್ನಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಂಗಳವಾರ ಮಧ್ಯಾರಾಧನೆ, ಬುಧವಾರ ಉತ್ತರಾರಾಧನೆ ಜರುಗಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆಯಿದೆ ಎಂದು ಮಠದ ಆಡಳಿತ ಮಂಡಳಿ ತಿಳಿಸಿದೆ.

LEAVE A REPLY

Please enter your comment!
Please enter your name here