Home ಧಾರ್ಮಿಕ ಸುದ್ದಿ ಶ್ರೀ ಚಕ್ರ ರಾಜರಾಜೇಶ್ವರಿ ದೇವಸ್ಥಾನಕ್ಕೆ ವಿಗ್ರಹ ಮೆರವಣಿಗೆ

ಶ್ರೀ ಚಕ್ರ ರಾಜರಾಜೇಶ್ವರಿ ದೇವಸ್ಥಾನಕ್ಕೆ ವಿಗ್ರಹ ಮೆರವಣಿಗೆ

1593
0
SHARE

ಪುತ್ತೂರು: ಆರ್ಯಾಪು ಗ್ರಾಮದ ಸಂಪ್ಯ ಬೂಡಿಯಾರು ಹೊಸಮನೆಯಲ್ಲಿ ನಿರ್ಮಾಣಗೊಂಡಿರುವ ಶ್ರೀಚಕ್ರ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಮೇ 24ರಿಂದ 30ರ ತನಕ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಪುತ್ತೂರಿನಿಂದ ಶ್ರೀ ಚಕ್ರ ರಾಜರಾಜೇಶ್ವರಿ ಹಾಗೂ ಗಣಪತಿ ದೇವರ ಮೂರ್ತಿಯನ್ನು ದೇವಸ್ಥಾನಕ್ಕೆ ಮೆರವಣಿಗೆಯ ಮೂಲಕ ಕೊಂಡೊಯ್ಯಲಾಯಿತು.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ದೇವಾಲಯದಿಂದ ವಠಾರದಿಂದ ದೇವರ ವಿಗ್ರಹ ಮೆರವಣಿಗೆ ಆರಮಭಗೊಂಡಿತು. ಬ್ರಹ್ಮಕಲಶೋತ್ಸವ ಸಮಿತಿ ಗೌರವ ಸಲಹೆಗಾರ ಮಂಜಪ್ಪ ರೈ ಬಾರಿಕೆ ತೆಂಗಿನಕಾಯಿ ಒಡೆದು ಮೆರವಣಿಗೆಗೆ ಚಾಲನೆ ನೀಡಿದರು.

ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯ, ಅಧ್ಯಕ್ಷ ಸಿ.ಟಿ. ಸುರೇಶ್‌, ಕಾರ್ಯಾಧ್ಯಕ್ಷ ನಾಗೇಶ್‌ ಸಂಪ್ಯ, ಪ್ರಧಾನ ಕಾರ್ಯದರ್ಶಿ ಜಯಂತ ಶೆಟ್ಟಿ ಕಂಬಳತ್ತಡ್ಡ, ಕಾರ್ಯದರ್ಶಿ ಸುರೇಶ್‌, ಉಪಾಧ್ಯಕ್ಷ ರವಿಚಂದ್ರ ಆಚಾರ್ಯ ಸಂಪ್ಯ, ಪೂರ್ಣಿಮಾ ರೈ ಮಜಲು ಕಂಬಳತ್ತಡ್ಡ, ಸ್ವಾಗತ ಸಮಿತಿ ಸೀತಾರಾಮ ಶೆಟ್ಟಿ ಕಂಬಳತ್ತಡ್ಡ, ಶೋಭಾ ಕೃಷ್ಣಪ್ಪ ಗೌಡ, ಮನೀತ್‌ ಕುಮಾರ್‌ ಹೊಸಮನೆ, ಆನಂದ ಪೂಜಾರಿ ಹೊಸಮನೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗಂಗಾಧರ ಅಮೀನ್‌, ಉಪಾಧ್ಯಕ್ಷ ಲಿಂಗಪ್ಪ ಗೌಡ ಕೊಲ್ಯ, ಧನಂಜಯ ಶೆಟ್ಟಿ ಮೇರ್ಲ ಪಾಲ್ಗೊಂಡರು.

LEAVE A REPLY

Please enter your comment!
Please enter your name here