ಉಡುಪಿ: ಕೊರಂಗ್ರಪಾಡಿ ಶ್ರೀ ಮಹಾವಿಷ್ಣುಮೂರ್ತಿ ದೇಗುಲದ ಗರ್ಭಗುಡಿ, ತೀರ್ಥ ಮಂಟಪ, ಸುತ್ತುಪೌಳಿಯ ಸಮಗ್ರ ಜೀರ್ಣೋದ್ಧಾರದ ಪ್ರಯುಕ್ತ ಬುಧವಾರ ದೇವರ ಸಾನ್ನಿಧ್ಯ ಸಂಕೋಚ ಪ್ರಕ್ರಿಯೆ, ಗುರುವಾರ ದೇವರ ಬಾಲಾಲಯ ಪ್ರತಿಷ್ಠಾ ವಿಧಿಯು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನೆರವೇರಿತು.
ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರು, ಕಾರ್ಯಾಧ್ಯಕ್ಷರು, ಸದಸ್ಯರು, ಭಕ್ತರು, ಗ್ರಾಮಸ್ಥರು ಭಾಗವಹಿಸಿದ್ದರು.