ಮಹಾನಗರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಂಗಳೂರು ತಾಲೂಕು ನೀರುಮಾರ್ಗ ವಲಯದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ವಾಮಂಜೂರಿನ ಮಂಗಳಜ್ಯೋತಿ ಸಮಗ್ರ ಶಾಲೆಯಲ್ಲಿ ಇತ್ತೀಚೆಗೆ ನಡೆಯಿತು.
ಉದ್ಯಮಿ ಸತೀಶ್ ಶೆಟ್ಟಿ ಮೂಡುಜಪ್ಪುಗುತ್ತು ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಸೋಂದ ಡಾ| ಭಾಸ್ಕರ್ ಭಟ್ ಸತ್ಯನಾರಾಯಣ ಪೂಜೆಯ ಮಹತ್ವ ತಿಳಿಸಿದರು.
ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ತಾಲೂಕು ಯೋಜನಾಧಿಕಾರಿ ಉಮ ರಬ್ಬ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಸಮುದಾಯ ಅಭಿವೃದ್ಧಿ ಕಾರ್ಯಕ್ರಮದ ಅಂಗವಾಗಿ ಮಲ್ಲೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ 3 ಲಕ್ಷ ರೂ., ಪೆರ್ಮಂಕಿ ಮಹಿಳಾ ಹಾಲು ಉತ್ಪಾದಕರ ಸಂಘಕ್ಕೆ 50,000 ರೂ. ವಾಮಂಜೂರು ಅಕ್ಷರ ಸದನಕ್ಕೆ 1 ಲಕ್ಷ ರೂ. ಮತ್ತು ಶಿಷ್ಯವೇತನ ವಿತರಿಸಲಾಯಿತು.
ಮಂಗಳಜ್ಯೋತಿ ಸಮಗ್ರ ಶಾಲೆಗೆ ನೀರುಮಾರ್ಗ ವಲಯದಿಂದ 25 ಚೆಯರ್ಗಳನ್ನು ನೀಡಲಾಯಿತು. ಕಾರ್ಪೊರೇಟರ್ ಹೇಮಲತಾ ರಘು ಸಾಲ್ಯಾನ್, ರಾಜೀವ ಸಿ. ಶೆಟ್ಟಿ ಸಲ್ಲಾಜೆ, ಅಧ್ಯಕ್ಷ ರುಕ್ಮಯ ಉಪಸ್ಥಿತರಿದ್ದರು.
ವಲಯದ ಸೇವಾ ಪ್ರತಿನಿಧಿಗಳು, ಒಕ್ಕೂಟದ ಅಧ್ಯಕ್ಷರುಗಳು, ಪದಾಧಿ ಕಾರಿಗಳು, ಪ್ರಗತಿಬಂಧು ಸ್ವ-ಸಹಾಯ ಸಂಘದ ಸದಸ್ಯರು ಉಪಸ್ಥಿತರಿ ದ್ದರು. ಪೆರ್ಮಂಕಿಗುತ್ತು ಕಿರಣ್ ಪಕ್ಕಳ ನಿರೂಪಿಸಿ, ವಲಯದ ಮೇಲ್ವಿಚಾರಕ ಸಂಪತ್ ಕುಮಾರ್ ಸ್ವಾಗತಿಸಿದರು. ವಲ ಯಾಧ್ಯಕ್ಷ ರುಕ್ಮಯ ಪಿ. ವಂದಿಸಿದರು.