ವೇಣೂರು : ಜೀರ್ಣೋದ್ಧಾರ ಗೊಳ್ಳುತ್ತಿರುವ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ರಾಜ್ಯ ಸರಕಾರದ ಧಾರ್ಮಿಕದತ್ತಿ ಇಲಾಖೆಯಿಂದ ಒದಗಿಸಲಾದ ರೂ. 5 ಲಕ್ಷ ಮೊತ್ತದ ಚೆಕ್ಕನ್ನು ಶನಿವಾರ ಬೆಳ್ತಂಗಡಿ ತಹಶೀಲ್ದಾರ್ ಮದನ್ ಮೋಹನ್ ಅವರು ಸಮಿತಿ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.
ನಾರಾವಿ ಜಿಲ್ಲಾ ಪಂಚಾಯತ್ ಸದಸ್ಯ ಪಿ. ಧರಣೇಂದ್ರ ಕುಮಾರ್, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎ. ಜಯರಾಮ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಪ್ರ. ಕಾರ್ಯದರ್ಶಿ ಪ್ರಭಾಕರ ಹೆಗ್ಡೆ ಹಟ್ಟಾಜೆ, ವ್ಯವಸ್ಥಾಪನ ಸಮಿತಿ ಸದಸ್ಯ ಸತೀಶ್ ಹೆಗ್ಡೆ, ಸುದರ್ಶನ ಪಿಲ್ಲಂಬು ಮೊದಲಾದವರು ಜತೆಗಿದ್ದರು.